ಬೆಂಗಳೂರು: ರಾಜ್ಯದಲ್ಲಿ ಈ ವಾರದ ಆರಂಭದಲ್ಲಿ ಮಳೆಯಾಗಿತ್ತು. ಇಂದು ಮಳೆಯಾಗುವ ಸಾಧ್ಯತೆಯಿದೆಯಾ, ಇಲ್ಲಿದೆ ಇಂದಿನ ಹವಾಮಾನ ವರದಿ.
ಈ ವಾರ ರಾಜ್ಯದಲ್ಲಿ ಮಳೆ ಮತ್ತು ಚಳಿ ಎರಡೂ ಕಂಡುಬಂದಿತ್ತು. ವಾಯು ಭಾರ ಕುಸಿತದಿಂದ ಈ ವಾರ ಹವಾಮಾನ ವೈಪರೀತ್ಯ ಕಂಡುಬಂದಿತ್ತು. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿತ್ತು.
ಆದರೆ ಇಂದು ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ. ಮೋಡದ ಸಾಧ್ಯತೆಯಿಲ್ಲ.
ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್ ಜಿಲ್ಲೆಗಳಲ್ಲಿ ಅತ್ಯಂತ ಕನಿಷ್ಠ ತಾಪಮಾನ 14-15 ಡಿಗ್ರಿಯಷ್ಟು ಕಂಡುಬರಲಿದೆ. ಕೋಲಾರ, ತುಮಕೂರು ಜಿಲ್ಲೆಗಳಲ್ಲಿ 16 ಡಿಗ್ರಿಯಷ್ಟಿರಲಿದೆ. ಉಳಿದ ಜಿಲ್ಲೆಗಳಲ್ಲಿ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗುತ್ತಾ ಸಾಗಲಿದೆ.