Publish Date: Thu, 02 Apr 2026 (08:40 IST)
Updated Date: Thu, 02 Apr 2026 (08:43 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ.ಇಂದು ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ಒಂದು ವಾರದಿಂದ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಬೇಸಿಗೆ ಮಳೆಯಿಂದ ರೈತರಿಗೆ ಕೊಂಚ ನಷ್ಟವಾದರೂ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಇದು ಕೊಂಚ ತಂಪು ನೀಡಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಇದರ ಹೊರತಾಗಿ ಬೆಳಗಾವಿ ಜಿಲ್ಲೆಯಲ್ಲೂ ಇಂದು ಗುಡುಗು ಸಹಿತ ಮಳೆ ನಿರೀಕ್ಷಿಸಬಹುದಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.
ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿಯಷ್ಟು ತಲುಪಲಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ ಸರಾಸರಿ 21 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.