Publish Date: Wed, 06 May 2026 (08:37 IST)
Updated Date: Wed, 06 May 2026 (08:39 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದೆ. ಇಂದು ರಾಜ್ಯದ ಮತ್ತೆ ಕೆಲವು ಜಿಲ್ಲೆಗೆ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ನಿನ್ನೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಬಿಟ್ಟರೆ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ ವಾರಂತ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇಂದು ಮತ್ತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಇಂದು ಬೆಂಗಳೂರಿನಲ್ಲಿ ತಕ್ಕ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ. ಉಳಿದಂತೆ ಕೊಡಗು, ಗದಗ, ಉಡುಪಿ, ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ಅಥವಾ ಬಿಸಿಲಿನ ವಾತಾವರಣವಿರಲಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ