Karnataka Weather: ಕರ್ನಾಟಕದ ಹಲವು ಜಿಲ್ಲೆಗಳಿಗೆ ಇಂದು ಭಾರೀ ಮಳೆ ಸೂಚನೆ

Karnataka Weather
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ಕಳೆದ ಎರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಬೇಸಿಗೆಯ ಈ ಮಳೆ ಸುಡು ಬಿಸಿಲಿನ ವಾತಾವರಣವನ್ನು ಕೊಂಚ ತಂಪು ಮಾಡಿದೆ.

ಇಂದೂ ಕೂಡಾ ಹಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಇನ್ನು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ವೇತನ ಹೆಚ್ಚಳಕ್ಕೆ ಸರ್ಕಾರ ಅಸ್ತು