Select Your Language

Notifications

webdunia
webdunia
webdunia
webdunia

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

Bangalore Rains
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಲೇ ಇದೆ. ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ತಕ್ಕಮಟ್ಟಿಗೆ ಮಳೆಯಾಗುತ್ತಲೇ  ಇದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾವೇರಿ, ಕೊಪ್ಪಳ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಟ್ಟ ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ರಾಜ್ಯದ ಗರಿಷ್ಠ ತಾಪಮಾನ ಇಂದು ಸರಾಸರಿ 34 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು