Select Your Language

Notifications

webdunia
webdunia
webdunia
webdunia

Karnataka Weather: ವಾರಂತ್ಯಕ್ಕೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

Karnataka Rains
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ವಾರಂತ್ಯದಲ್ಲೂ ಈ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಗಳಿವೆ.

ಕರ್ನಾಟಕ ಬಹುತೇಕ ಕಡೆ ಬೇಸಿಗೆ ಮಳೆ ಅಬ್ಬರ ಮುಂದುವರಿದಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಬೇಸಿಗೆಯ ಬೇಗೆಗೆ ಕೊಂಚ ಕಡಿವಾಣ ಬಿದ್ದಿದೆ. ಈ ವಾರವಿಡೀ ಮಳೆಯಾಗಿತ್ತು.

ವಾರಂತ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆಯಾಗುವ ಸೂಚನೆಯಿದೆ.

ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ದಟ್ಟ ಮೋಡಕವಿದ ವಾತಾವರಣವಿರುವುದು. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟು ಮತ್ತು ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಇರುವುದು.


Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್