Select Your Language

Notifications

webdunia
webdunia
webdunia
webdunia

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

Karnataka Rains
ಬೆಂಗಳೂರು: ಕಳೆದ ವಾರವಿಡೀ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ  ವಾರವೂ ಮಳೆಯ ವಾತಾವರಣ ಮುಂದುವರಿಯಲಿದೆಯಾ, ಇಲ್ಲಿದೆ ವಾರದ ಹವಾಮಾನ ವರದಿ.

ರಾಜ್ಯದಲ್ಲಿ ಈಗ ಬೇಸಿಗೆ ಮಳೆಯ ಅಬ್ಬರ ಕಂಡುಬರುತ್ತಿದೆ. ವಾರಂತ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ಮುಂಗಾರು ಪೂರ್ವ ಮಳೆಯ ಅಬ್ಬರ ಇನ್ನಷ್ಟು ದಿನ ಮುಂದುವರಿಯಲಿದೆ ಎನ್ನುತ್ತಿದೆ ಹವಾಮಾನ ವರದಿಗಳು.

ಮೂಲಗಳ ಪ್ರಕಾರ ಈ ವಾರವೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಈ ವಾರ ಬಹುತೇಕ ಎಲ್ಲಾ ದಿನಗಳಲ್ಲಿ ಮಳೆಯಾಗಲಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು ಅಥವಾ ಮೋಡ ಕವಿದ ವಾತಾವರಣ ಕಂಡುಬರುವುದು. ಇನ್ನು ಕೆಲವು ದಿನ ಉರಿಬಿಸಿಲಿನ ವಾತಾವರಣವಿರಲಿದೆ. ಈ ವಾರದ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 32 ಡಿಗ್ರಿಯಿದ್ದರೆ ಕನಿಷ್ಠ ತಾಪಮಾನ 22-23 ಡಿಗ್ರಿಯಷ್ಟು ಇರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ