Publish Date: Wed, 20 May 2026 (08:43 IST)
Updated Date: Wed, 20 May 2026 (08:45 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದೂ ಕೂಡಾ ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ಒಂದು ವಾರದಿಂದ ಕರಾವಳಿ, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ನೋಡಿಕೊಳ್ಳಿ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ವಿಜಯಪುರ, ಬೆಳಗಾವಿ, ಯಾದಗಿರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.
ಉಳಿದಂತೆ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ದಟ್ಟ ಮೋಡ ಕವಿದ ವಾತಾವರಣವಿರಲಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ