Publish Date: Wed, 24 Jun 2026 (08:39 IST)
Updated Date: Wed, 24 Jun 2026 (08:41 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಇಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಿದೆ.
ಇಂದೂ ಸಹ ಮುಂಜಾನೆಯಿಂದಲೇ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಪ್ರಾದೇಶಿಕ ಮಳೆ ಮುನ್ಸೂಚನೆ: ಎಲ್ಲೆಲ್ಲಿ ಮಳೆ?
ಕರಾವಳಿ ಮತ್ತು ಮಲೆನಾಡು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ದಕ್ಷಿಣ ಒಳನಾಡು: ಸಿಲಿಕಾನ್ ಸಿಟಿ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮತ್ತು ಕೋಲಾರ ಜಿಲ್ಲೆಗಳಲ್ಲಿ ದಿನವಿಡೀ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕಲ್ಬುರ್ಗಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ