Publish Date: Wed, 01 Jul 2026 (08:31 IST)
Updated Date: Wed, 01 Jul 2026 (08:34 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿರುವುದರಿಂದ ಇಂದು ಕರಾವಳಿ ಜಿಲ್ಲೆಗಳಲ್ಲಿ ಜಲಾವೃತಗೊಳ್ಳುವ ಸಾಧ್ಯತೆ ಇದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕ - 'ಆರೆಂಜ್ ಅಲರ್ಟ್'
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಅತಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಿದೆ.
ಗಾಳಿಯ ವೇಗ: ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.ಸೂಚನೆ: ಪ್ರವಾಸಿಗರು ನದಿ, ಸಮುದ್ರ ತೀರ ಹಾಗೂ ಜಲಪಾತಗಳ ಬಳಿ ಹೋಗದಂತೆ ಮತ್ತು ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.ಬೀಸಲಿದೆ.
ದಕ್ಷಿಣ ಒಳನಾಡು - 'ಸಾಧಾರಣ ಮಳೆ'
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ 60-70% ಸಾಧ್ಯತೆ ಇದೆ.
ಉತ್ತರ ಒಳನಾಡು - 'ಹಗುರ ಮಳೆ'
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ವಿಜಯನಗರ ಮತ್ತು ಬಳ್ಳಾರಿ ಭಾಗಗಳಲ್ಲಿ ಒಣ ಹವಾಮಾನದೊಂದಿಗೆ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಬಹುದು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ