Daily Horoscope
✕

Karnataka Weather: ಇಂದು ಈ ಜಿಲ್ಲೆಗಳಿಗೆ ಮತ್ತಷ್ಟು ತೀವ್ರವಾಗಲಿದೆ ಮಳೆ

ಕೃಷ್ಣವೇಣಿ ಕೆ
ಬುಧವಾರ, 1 ಜುಲೈ 2026 (08:31 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿರುವುದರಿಂದ ಇಂದು ಕರಾವಳಿ ಜಿಲ್ಲೆಗಳಲ್ಲಿ ಜಲಾವೃತಗೊಳ್ಳುವ ಸಾಧ್ಯತೆ ಇದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕ - 'ಆರೆಂಜ್ ಅಲರ್ಟ್'
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಅತಿ ಭಾರಿ ಮಳೆ  ಆಗುವ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಿದೆ. 

ಗಾಳಿಯ ವೇಗ: ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.ಸೂಚನೆ: ಪ್ರವಾಸಿಗರು ನದಿ, ಸಮುದ್ರ ತೀರ ಹಾಗೂ ಜಲಪಾತಗಳ ಬಳಿ ಹೋಗದಂತೆ ಮತ್ತು ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.ಬೀಸಲಿದೆ.

ದಕ್ಷಿಣ ಒಳನಾಡು - 'ಸಾಧಾರಣ ಮಳೆ'
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ 60-70% ಸಾಧ್ಯತೆ ಇದೆ.

ಉತ್ತರ ಒಳನಾಡು  - 'ಹಗುರ ಮಳೆ'
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ವಿಜಯನಗರ ಮತ್ತು ಬಳ್ಳಾರಿ ಭಾಗಗಳಲ್ಲಿ ಒಣ ಹವಾಮಾನದೊಂದಿಗೆ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments