Select Your Language

Notifications

webdunia
webdunia
webdunia
webdunia

Karnataka Weather: ಕರ್ನಾಟಕ ಈ ಜಿಲ್ಲೆಗೆ ಇಂದು ಭಾರೀ ಮಳೆ ಎಚ್ಚರಿಕೆ

Karnataka Weather
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂಗಾರು ಮಾರುತಗಳು ಚುರುಕಾಗಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉಳಿದ ಜಿಲ್ಲೆಗಳಲ್ಲೂ ತಂಪಾದ ವಾತಾವರಣ ಇರಲಿದೆ.

ಕರಾವಳಿ ಜಿಲ್ಲೆಗಳಿಗೆ 'ಭಾರಿ ಮಳೆ'ಯ ಮುನ್ನೆಚ್ಚರಿಕೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅತ್ಯಂತ ಚುರುಕಾಗಲಿದ್ದು, ಹೆಚ್ಚಿನ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡು ಮತ್ತು ಒಳನಾಡು ಜಿಲ್ಲೆಗಳ ಸ್ಥಿತಿ
ಮಲೆನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಒಳನಾಡು: ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಹವಾಮಾನ
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ತಂಪಾದ ಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Video, ಬೆಂಗಳೂರು ಡೇಕೇರ್‌ನಲ್ಲಿ ಬಾಯಿಗೆ ಪೈಪ್‌ ತುರುಕಿ ಪುಟ್ಟ ಕಂದಮ್ಮಗಳ ವಿಕೃತಿ ಮೆರೆದ ಪಾಪಿಗಳಿಗೆ ಢವಢವ