Publish Date: Wed, 15 Jul 2026 (08:32 IST)
Updated Date: Wed, 15 Jul 2026 (08:34 IST)
ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ನೈಋತ್ಯ ಮಾನ್ಸೂನ್ ಸಾಧಾರಣ ಸಕ್ರಿಯವಾಗಿದ್ದು, ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಶವರ್‌ಗಳು ಕಂಡುಬರಲಿವೆ.
ಕರಾವಳಿ ಕರ್ನಾಟಕ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ):
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕರಾವಳಿ ತೀರದಲ್ಲಿ ಗಾಳಿಯ ಭರಾಟೆ ಹೆಚ್ಚಿರಲಿದೆ.
ಮಲೆನಾಡು ಭಾಗಗಳು (ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು):
ಮಲೆನಾಡಿನ ನಾಲ್ಕೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮೋಡಕವಿದ ವಾತಾವರಣದ ಜೊತೆಗೆ ಸಾಧಾರಣ ಗಾಳಿ ಬೀಸಲಿದೆ.
ಉತ್ತರ ಒಳನಾಡು (ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಬೀದರ್, ರಾಯಚೂರು):
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ಪ್ರಮುಖವಾಗಿ ಒಣ ಹವಾಮಾನ ಹಾಗೂ ಮೋಡಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಹೆಚ್ಚಿರಲಿದೆ.
ದಕ್ಷಿಣ ಒಳನಾಡು ಹಾಗೂ ಬೆಂಗಳೂರು ನಗರ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ನಗರ ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಒಂದೆರಡು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗಬಹುದು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ