Daily Horoscope
✕

Karnataka Weather: ಇಂದು ಈ ಜಿಲ್ಲೆಗಳಿಗೆ ಸಾಧಾರಣ ಮಳೆ ನಿರೀಕ್ಷೆ

ಕೃಷ್ಣವೇಣಿ ಕೆ
ಬುಧವಾರ, 15 ಜುಲೈ 2026 (08:32 IST)
ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ನೈಋತ್ಯ ಮಾನ್ಸೂನ್ ಸಾಧಾರಣ ಸಕ್ರಿಯವಾಗಿದ್ದು, ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಶವರ್‌ಗಳು ಕಂಡುಬರಲಿವೆ.

ಕರಾವಳಿ ಕರ್ನಾಟಕ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ):
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕರಾವಳಿ ತೀರದಲ್ಲಿ ಗಾಳಿಯ ಭರಾಟೆ ಹೆಚ್ಚಿರಲಿದೆ.

ಮಲೆನಾಡು ಭಾಗಗಳು (ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು):
ಮಲೆನಾಡಿನ ನಾಲ್ಕೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮೋಡಕವಿದ ವಾತಾವರಣದ ಜೊತೆಗೆ ಸಾಧಾರಣ ಗಾಳಿ ಬೀಸಲಿದೆ.

ಉತ್ತರ ಒಳನಾಡು (ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಬೀದರ್, ರಾಯಚೂರು):
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ಪ್ರಮುಖವಾಗಿ ಒಣ ಹವಾಮಾನ ಹಾಗೂ ಮೋಡಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಹೆಚ್ಚಿರಲಿದೆ.

ದಕ್ಷಿಣ ಒಳನಾಡು ಹಾಗೂ ಬೆಂಗಳೂರು ನಗರ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ನಗರ ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಒಂದೆರಡು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments