Webdunia - Bharat's app for daily news and videos

Install App

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಕೃಷ್ಣವೇಣಿ ಕೆ
ಮಂಗಳವಾರ, 11 ಆಗಸ್ಟ್ 2026 (08:30 IST)
ಬೆಂಗಳೂರು: ರಾಜ್ಯದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಹವಾಮಾನ ವೈಪರೀತ್ಯದ ಪ್ರಭಾವ ಹೆಚ್ಚಾಗಿದ್ದು, ಇಂದು ರಾಜ್ಯದಾದ್ಯಂತ ವಾತಾವರಣದಲ್ಲಿ ಗಣನೀಯ ಬದಲಾವಣೆ ಕಂಡುಬರಲಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಆರ್ಭಟ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಇನ್ನು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಸಹ ಮೋಡಕವಿದ ವಾತಾವರಣದೊಂದಿಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಸ್ಥಿತಿಗತಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಡೀ ದಿನ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ, ಬಯಲು ಸೀಮೆಯ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆ ಒಣ ಹವಾಮಾನ ಮುಂದುವರಿಯಲಿದ್ದು, ಕೆಲವು ಕಡೆ ಮಾತ್ರ ಹಗುರವಾದ ಜಲ್ಲೆ ಮಳೆಯಾಗುವ ಸ್ಯಾದ್ಯತೆಯಿದೆ.

ಬೆಂಗಳೂರು ನಗರದ ವಾತಾವರಣ
ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವ ತಣ್ಣನೆಯ ಗಾಳಿ ಹಾಗೂ ಸಣ್ಣ ಪ್ರಮಾಣದ ಮಂಜು ಮುಸುಕಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಸುಮಾರಿನಲ್ಲಿ ದಾಖಲಾಗಬಹುದು. ಸಂಜೆಯ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಪ್ರಯಾಣಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಒಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments