Daily Horoscope
✕

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ಕೃಷ್ಣವೇಣಿ ಕೆ
ಬುಧವಾರ, 12 ಆಗಸ್ಟ್ 2026 (08:50 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಸಾಧಾರಣವಾಗಿದ್ದು, ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ)
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮಳೆಯ ಸಾಧ್ಯತೆ: ಶೇ. 70 – 80

ವಾತಾವರಣ: ಸಂಪೂರ್ಣ ಮೋಡಕವಿದ ವಾತಾವರಣ

ಮಲೆನಾಡು ಭಾಗ (ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ)
ಮಲೆನಾಡಿನ ಗಿರಿಪ್ರದೇಶಗಳು ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಮುಸುಕಿದ ವಾತಾವರಣವಿರಲಿದೆ.

ಮಳೆಯ ಸಾಧ್ಯತೆ: ಶೇ. 60 – 70

ವಾತಾವರಣ: ತಂಪಾದ ತೇವಾಂಶಭರಿತ ವಾತಾವರಣ

ದಕ್ಷಿಣ ಒಳನಾಡು (ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ)
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಗರಿಷ್ಠ ತಾಪಮಾನ 29°C ಹಾಗೂ ರಾತ್ರಿ ವೇಳೆ ಕನಿಷ್ಠ ತಾಪಮಾನ 23°C ದಾಖಲಾಗುವ ನಿರೀಕ್ಷೆಯಿದೆ.

ಮಳೆಯ ಸಾಧ್ಯತೆ: ಹಗಲಿನಲ್ಲಿ ಶೇ. 45, ರಾತ್ರಿ ವೇಳೆ ಶೇ. 20

ಉತ್ತರ ಒಳನಾಡು (ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ)
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವೆಡೆ ಮಾತ್ರ ಹಗುರ ಮಳೆಯಾಗಬಹುದು.

ಮಳೆಯ ಸಾಧ್ಯತೆ: ಶೇ. 30 – 40

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments