Daily Horoscope
✕

Karnataka Weather: ಬೆಂಗಳೂರಿಗರಿಗೇ ಗಮನಿಸಿ.. ಇಂದು ಮುಂದುವರಿಯುತ್ತಾ ಮಳೆ ಇಲ್ಲಿದೆ ನೋಡಿ ವಿವರ

ಕೃಷ್ಣವೇಣಿ ಕೆ
ಶುಕ್ರವಾರ, 21 ಆಗಸ್ಟ್ 2026 (09:04 IST)
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಚಟುವಟಿಕೆಗಳು ಮುಂದುವರಿದಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ ಎಂದು IMD Bengaluru ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಚದುರಿದಂತೆ ಮಳೆಯಾಗಲಿದೆ. 

 
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. 

 
ದಕ್ಷಿಣ ಒಳನಾಡು ಜಿಲ್ಲೆಗಳು

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಹೆಚ್ಚಾಗಿ ಮೋಡಕವಿದ ವಾತಾವರಣ ಮುಂದುವರಿಯಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಹಗುರವಾದ ಮಳೆ ಅಥವಾ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.

 
ಉತ್ತರ ಒಳನಾಡು ಜಿಲ್ಲೆಗಳು

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಿರಲಿದ್ದು, ಕೆಲವು ಕಡೆಗಳಲ್ಲಿ ಹಗುರವಾದ ಜಿಟಿಜಿಟಿ ಮಳೆಯಾಗಬಹುದು. ತಾಪಮಾನದಲ್ಲಿ ಭಾರಿ ಏರಿಳಿತವಿಲ್ಲದೆ ಸಾಮಾನ್ಯ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments