Daily Horoscope
✕

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

ಕೃಷ್ಣವೇಣಿ ಕೆ
ಬುಧವಾರ, 26 ಆಗಸ್ಟ್ 2026 (08:44 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚಟುವಟಿಕೆಗಳು ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಹಗುರ ಜಲ್ಲೆ ಬೀಳುವ ಸಾಧ್ಯತೆಯಿದೆ.

 
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮುನ್ಸೂಚನೆ:

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಅದೇ ರೀತಿ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಜೊತೆಗೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

 
ಉತ್ತರ ಒಳನಾಡು ಹಾಗೂ ಬೆಳಗಾವಿ ಭಾಗ:

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಯಿದೆ. ಕೃಷ್ಣಾ ಮತ್ತು ಭೀಮಾ ನದಿ ತೀರದ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ಕಾಯ್ದುಕೊಳ್ಳಲಿದ್ದು, ತಂಪಾದ ಗಾಳಿ ಬೀಸಲಿದೆ. ಕೆಲವೆಡೆ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಆಘಾತ ಎದುರಾಗಬಹುದು ಎಂದು ಇಲಾಖೆ ಎಚ್ಚರಿಸಿದೆ.

 
ದಕ್ಷಿಣ ಒಳನಾಡು ಮತ್ತು ರಾಜಧಾನಿ ಬೆಂಗಳೂರು:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ದಿನವಿಡೀ ಭಾಗಶಃ ಅಥವಾ ಪೂರ್ತಿಯಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಶವರ್ಸ್ ಆಗುವ ಸಾಧ್ಯತೆಯಿದೆ. ಮಹಾನಗರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು ಸುಮಾರು 28 ರಿಂದ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ರಿಂದ 21 ಡಿಗ್ರಿ ಸೆಲ್ಸಿಯಸ್ ವರೆಗೆ ಇರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments