Daily Horoscope
✕

Karnataka Weather: ವಾಯುಭಾರ ಕುಸಿತ, ಇಂದು ಎಲ್ಲೆಲ್ಲಾ ಮಳೆಯಾಗಲಿದೆ ನೋಡಿ

ಕೃಷ್ಣವೇಣಿ ಕೆ
ಶುಕ್ರವಾರ, 4 ಸೆಪ್ಟಂಬರ್ 2026 (08:54 IST)
ಬೆಂಗಳೂರು: ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಇಂದು ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದ ಜನರಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಸ್ಥಿತಿ:
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ದಿನವಿಡೀ ಜಿಟಿಜಿಟಿ ಮಳೆ ಮುಂದುವರಿಯಲಿದ್ದು, ಸಂಜೆಯ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗಬಹುದು. ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ:
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವೆಡೆ ಮಾತ್ರ ಹಗುರವಾದ ಮಳೆ ಅಥವಾ ತುಂತುರು ಮಳೆಯಾಗುವ ಮುನ್ಸೂಚನೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments