ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತುಂತುರು ಮಳೆಯಾಗಿತ್ತು. ಜೊತೆಗೆ ದಿನವಿಡೀ ದಟ್ಟ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ಇಂದೂ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ ಎನ್ನಲಾಗಿದೆ.
ಇಂದು ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅದರಲ್ಲೂ ಕೊಡಗಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮತ್ತು ಬಿಸಿಲು ಕಂಡುಬರುವುದು.