ಬೆಂಗಳೂರು: ಕರ್ನಾಟಕದಲ್ಲಿ ಈ ವಾರ ಮಳೆಯ ಅಬ್ಬರ ಕಡಿಮೆಯಾದರೂ ಕೆಲವು ಕಡೆ ಅಲ್ಲಲ್ಲಿ ರಾತ್ರಿ ಮಳೆಯಾಗುತ್ತಿದೆ. ಈ ವಾರಂತ್ಯಕ್ಕೆ ಮಳೆಯ ಬಿರುಸು ಹೆಚ್ಚಾಗಲಿದ್ದು, ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ವಿವರ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು-ಮೂರು ದಿನಗಳಿಂದ ರಾತ್ರಿ ಮಳೆಯಾಗುತ್ತಿತ್ತು. ಇನ್ನು ಕೆಲವು ಕಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಕೂಡಾ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಯಿದೆ.
ವಾರಂತ್ಯಕ್ಕೆ ಬೆಳಗಾವಿ, ಬಳ್ಳಾರಿ, ಗದಗ, ಶಿವಮೊಗ್ಗ, ಬೆಂಗಳೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯ ಸಂಭವವಿದೆ.
ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ವಿಜಯಪುರ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಕಡೆ ತುಂತುರು ಮಳೆ ಅಥವಾ ಗುಡುಗು ಕಂಡುಬರಲಿದೆ.