Karnataka Weather: ಈ ವಾರದಿಂದ ಮಳೆ ಕಡಿಮೆಯಾಗುತ್ತಾ, ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 10 ನವೆಂಬರ್ 2025 (08:37 IST)
ಬೆಂಗಳೂರು: ನವಂಬರ್ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಈ ವಾರ ಮಳೆ ಕಡಿಮೆಯಾಗುತ್ತಾ, ಇಲ್ಲವೇ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ.

ಕಳೆದ ವಾರ ಆರಂಭದಲ್ಲಿ ಸೈಕ್ಲೋನ್ ಪರಿಣಾಮ ಸ್ವಲ್ಪ ಮಳೆಯಾಗಿತ್ತು. ಈ ಬಾರಿ ಮುಂಗಾರು ಮಳೆಯಂತೇ ಹಿಂಗಾರು ಮಳೆಯೂ ಉತ್ತಮವಾಗಿತ್ತು. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಚಳಿಯ ವಾತಾವರಣ ಕಂಡುಬರುತ್ತಿದೆ.

ಹವಾಮಾನ ವರದಿಗಳ ಪ್ರಕಾರ ಈ ವಾರವಿಡೀ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ಕೆಲವೆಡೆ ಮಾತ್ರ ಸ್ವಲ್ಪ ಮೋಡ ಕವಿದ ವಾತಾವರಣ ಕಂಡುಬಂದೀತು. ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ,  ಮಾತ್ರ ವಾರದ ಮಧ್ಯಭಾಗದಲ್ಲಿ ಎರಡು ದಿನ ಸ್ವಲ್ಪ ಮಳೆಯಾಗಬಹುದು. ಅದು ಬಿಟ್ಟರೆ ಸದ್ಯದ ಮುನ್ಸೂಚನೆ ಪ್ರಕಾರ ಮಳೆಯ ಸಾಧ್ಯತೆಯಿಲ್ಲ.

ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಬೆಂಗಳೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಗದಗ, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ವಾರವಿಡೀ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

Delhi blast: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಪೋಟ: ಜನರಲ್ಲಿ ಆತಂಕ video

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments