ಬೆಂಗಳೂರು: ಕರ್ನಾಟಕ ಹವಾಮಾನದಲ್ಲಿ ಕೊಂಚ ಬದಲಾವಣೆಯಾಗಿದ್ದು ಇಂದಿನಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ವಾಯು ಭಾರ ಕುಸಿತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ಉಳಿದ ಕಡೆ ಮಂಜು ಜೊತೆಗೆ ಚಳಿಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.
ಕಳೆದ ಒಂದು ವಾರದಿಂದ ತಾಪಮಾನದಲ್ಲಿ ಸಣ್ಣ ಮಟ್ಟಿಗೆ ಏರಿಕೆ ಕಂಡುಬರುತ್ತಿದೆ. ಈ ವಾರಂತ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಬೇಸಿಗೆ ಆರಂಭಕ್ಕೆ ಮುನ್ನ ಸಣ್ಣ ಮಳೆಯಾಗಲಿದೆ ಎನ್ನಲಾಗುತ್ತಿದೆ.
ಇಂದು ಮತ್ತು ನಾಳೆ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಕೇವಲ ಕರ್ನಾಟಕ ಮಾತ್ರವಲ್ಲ, ದಕ್ಷಿಣ ಮತ್ತು ಉತ್ತರ ಭಾರತದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.