ಬೆಂಗಳೂರು: ಈ ಬಾರಿ ಮುಂಗಾರು ಬೇಗನೇ ಪ್ರವೇಶವಾಗಲಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿರಲಿಲ್ಲ. ಆದರೆ ಈ ವಾರ ಬಹುತೇಕ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಕೊಡಗು, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆಯಿದೆ.
ಇದರ ಹೊರತಾಗಿ ಬೆಂಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ತುಮಕೂರು, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ 31-30 ಡಿಗ್ರಿಯಷ್ಟಾಗುವ ಸಾಧ್ಯತೆಯಿದೆ.