Daily Horoscope
✕

Karnataka Weather: ರಾಜ್ಯದಲ್ಲಿ ಇಂದು ಈ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ

Krishnaveni K
ಶನಿವಾರ, 26 ಏಪ್ರಿಲ್ 2025 (08:43 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಬಿಸಿಲಿನಿಂದ ತತ್ತರಿಸಿದ್ದ ಜನಕ್ಕೆ ಇಂದು ಮಳೆಯ ಸಿಂಚನವಾಗಲಿದೆ. ಇಂದು ಈ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆಗಳಿವೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಬೇಸಿಗೆ ಮಳೆ ಅಬ್ಬರಿಸುತ್ತಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಲ್ಲ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಇಂದೂ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ.

ಇದರ ಹೊರತಾಗಿ ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚನೆ ನೀಡಿವೆ. ಮಳೆಯಿದ್ದರೂ ಈ ಜಿಲ್ಲೆಗಳಲ್ಲಿ ತಾಪಮಾನಕ್ಕೇನೂ ಕಡಿಮೆಯಿಲ್ಲ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತಾಪಮಾನ ವಿಪರೀತ ಎನಿಸುವಷ್ಟಿದೆ. ಹಗಲು ಹೊತ್ತು ಹೊರಗೆ ಕಾಲಿಡಲಾಗದಂತಹ ಪರಿಸ್ಥಿತಿಯಿದೆ. ಬೆಂಗಳೂರಿನಲ್ಲಿ ಇಂದೂ ಸಂಜೆ ವೇಳೆ ಮೋಡ ಕವಿದ ವಾತಾವರಣ ಬಿಟ್ಟರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೌದೌದು ರಾಹುಲ್ ಗಾಂಧಿ ಆಲೂಗಡ್ಡೆಯಿಂದ ಚಿನ್ನ ಹೇಗೆ ತೆಗೀತಾರೆ ಎಂದು ನೋಡಲು ಫೋನ್ ಟ್ಯಾಪ್ ಮಾಡಿದ್ದೆವು: ಬಿಜೆಪಿ ಸಂಸದನ ವ್ಯಂಗ್ಯ Video

Karnataka Weather: ಭಾನುವಾರ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ

ನನ್ನ ಹತ್ರ ಕಾಸಿರಲಿಲ್ಲ, ಅದಕ್ಕೆ ನನ್ನ ಟಿಕೆಟ್ ನ್ನೂ ಮೋದಿಯವರೇ ತಗೊಂಡ್ರು: ಡಿಕೆ ಶಿವಕುಮಾರ್

ನೆಹರು ಅವರ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಚಿಂತನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಸಿದ್ದರಾಮಯ್ಯ

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

ಮುಂದಿನ ಸುದ್ದಿ
Show comments