Select Your Language

Notifications

webdunia
webdunia
webdunia
webdunia

Karnataka Weather: ವಿಪರೀತ ತಾಪಮಾನದ ಜೊತೆಗೆ ಈ ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

Karnataka Rain

Krishnaveni K

ಬೆಂಗಳೂರು , ಗುರುವಾರ, 27 ಮಾರ್ಚ್ 2025 (08:48 IST)
ಬೆಂಗಳೂರು: ರಾಜ್ಯದಲ್ಲಿ ಬಿರು ಬೇಸಿಗೆ ತಾಂಡವವಾಡುತ್ತಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು, ಅದರ ನಡುವೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ.

ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದರೂ ಅಲ್ಲಲ್ಲಿ ಮಳೆಯಾಗುತ್ತಿದೆ. ಕಳೆದ ವಾರಂತ್ಯಕ್ಕೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಅದಾದ ಬಳಿಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತು.

ಇಂದಿನಿಂದ ತಾಪಮಾನದಲ್ಲಿ ಕೊಂಚ ಏರಿಕೆ ಕಾಣಲಿದೆ. ಮಳೆ ಬಂದಿದ್ದರಿಂದ ತಕ್ಕಮಟ್ಟಿಗೆ ಗರಿಷ್ಠ ತಾಪಮಾನ ಕಡಿಮೆಯಾಗಿತ್ತು. ಆದರೆ ಇಂದಿನಿಂದ ಗರಿಷ್ಠ ತಾಪಮಾನ ರಾಜ್ಯದಲ್ಲಿ ಸರಾಸರಿ 33 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಅದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆಯಾಗುವ ಸೂಚನೆಯಿದೆ. ಹಾಗಿದ್ದರೂ ತಾಪಮಾನವೂ ಯಥಾ ಪ್ರಕಾರ ಮುಂದುವರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gpay, Paytm ಸೇರಿದಂತೆ UPI ಪೇಮೆಂಟ್ ಇದ್ದಕ್ಕಿದ್ದಂತೆ ಡೌನ್: ಏನಾಗಿದೆ ನೋಡಿ