Publish Date: Fri, 04 Apr 2025 (08:35 IST)
Updated Date: Fri, 04 Apr 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇಂದೂ ಕೂಡಾ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ವರದಿ ಇಲ್ಲಿದೆ ನೋಡಿ.
ಕರ್ನಾಟಕದಲ್ಲಿ ಇದೀಗ ಪೂರ್ವ ಮುಂಗಾರಿನ ಅಬ್ಬರ ನಡೆಯುತ್ತಿದೆ. ಕಳೆದ ವಾರವಿಡೀ ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಈಗ ಮಳೆಯ ಸಿಂಚನವಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಮಳೆಯಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇಂದೂ ಕೂಡಾ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.