ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಬೇಸಿಗೆ ಮಳೆಯಾಗುತ್ತಿದೆ. ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.
 
 			
 
 			
					
			        							
								
																	ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ. ನಿನ್ನೆಯೂ ಮಳೆಯ ಸೂಚನೆಯಿತ್ತು. ಆದರೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮತ್ತು ಹನಿ ಮಳೆಯಾಗಿತ್ತಷ್ಟೇ.
ಹವಾಮಾನ ವರದಿಗಳ ಪ್ರಕಾರ ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ.
ಉಳಿದಂತೆ ಉಡುಪಿ, ಕಲಬುರಗಿ, ರಾಯಚೂರು, ಗದಗ, ಹುಬ್ಬಳ್ಳಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ಮುಂಗಾರು ಪೂರ್ವ ಮಳೆಯಾಗುತ್ತಿದ್ದರೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 30-32 ಡಿಗ್ರಿ ಆಸುಪಾಸಿನಲ್ಲಿದೆ.