Publish Date: Wed, 11 Mar 2026 (08:41 IST)
Updated Date: Wed, 11 Mar 2026 (08:44 IST)
ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆಯ ಬಿಸಿ ತಾಂಡವವಾಡುತ್ತಿದೆ. ಇದರ ನಡುವೆಯೂ ರಾಜ್ಯದ ಈ ಜಿಲ್ಲೆಗೆ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ರಾಜ್ಯದಲ್ಲಿ ಈಗ ವಿಪರೀತ ಎನ್ನುವಷ್ಟು ಬಿಸಿಲು ಕಂಡುಬರುತ್ತಿದೆ. ತಾಪಮಾನದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಒಣ ಹವೆ ಮುಂದುವರಿದಿದೆ. ಇದರ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬರಲಿದೆ.
ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇಂದು ಈ ಜಿಲ್ಲೆಯಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯೂ ಇಲ್ಲದಿಲ್ಲ. ಇದರ ನಡುವೆಯೂ ಸೆಖೆ ಮುಂದುವರಿಯಲಿದೆ.
ಇದರ ನಡುವೆ ಕಲಬುರಗಿ, ರಾಯಚೂರು, ಬೀದರ್, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆ ಹುಬ್ಬಳ್ಳಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಮೀರಲಿದೆ. ರಾಜ್ಯಾದ್ಯಂತ ಇಂದು ಸರಾಸರಿ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 18 ಡಿಗ್ರಿಯಷ್ಟು ಕಂಡುಬರುವುದು.