ಬೆಂಗಳೂರು: ಕಳೆದ ವಾರ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗಿತ್ತು. ಈ ವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಸಾಧ್ಯತೆಯಿದೆಯೇ ಇಲ್ಲಿದೆ ವಿವರ.
ಕಳೆದ ವಾರ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಅದರಲ್ಲೂ ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿತ್ತು.
ಆದರೆ ವಾರಂತ್ಯಕ್ಕೆ ಮತ್ತೆ ಬಿರುಬಿಸಿಲಿನ ವಾತಾವರಣವಿತ್ತು. ಈ ವಾರದ ಆರಂಭದ ಮೂರು ದಿನಗಳು ರಾಜ್ಯದ ಎಲ್ಲಾ ಭಾಗಗಳಲ್ಲಿ ವಿಪರೀತ ಬಿಸಿಲಿನ ವಾತಾವರಣವಿರಲಿದೆ. ಆದರೆ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಏಪ್ರಿಲ್ 3 ರಿಂದ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಎರಡು ದಿನಗಳ ಕಾಲ ಮಳೆಯ ಸೂಚನೆಯಿದೆ. ಉಳಿದಂತೆ ಈ ವಾರ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯವರೆಗೆ ತಲುಪುವ ಸಾಧ್ಯತೆಯಿದೆ.