Publish Date: Sat, 05 Jul 2025 (08:31 IST)
Updated Date: Sat, 05 Jul 2025 (08:33 IST)
ಬೆಂಗಳೂರು: ರಾಜ್ಯಾದ್ಯಂತ ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೆಷ್ಟು ದಿನ ಭಾರೀ ಮಳೆಯ ಮುನ್ಸೂಚನೆಯಿದೆ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೊನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದೂ ಕೂಡಾ ಈ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯಿದೆ. ಹವಾಮಾನ ವರದಿ ಪ್ರಕಾರ ಜುಲೈ 8 ರವರೆಗೂ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಒಳನಾಡಿನಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಈ ಬಾರಿ ಮಳೆ ಕಡಿಮೆ. ಆದರೆ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿತ್ತು. ಆದರೆ ಇಂದು ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉಳಿದಂತೆ ಮೈಸೂರು, ಮಂಡ್ಯ, ಹಾಸನ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಗದಗ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ.