ಬೆಂಗಳೂರು: ವಾರಂತ್ಯದಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ. ಈ ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಈ ವಾರವಿಡೀ ರಾಜ್ಯಾದ್ಯಂತ ಭಾರೀ ಚಳಿ ಮತ್ತು ಮಂಜಿನ ವಾತಾವರಣವಿತ್ತು. ಈ ವಾರ ಕನಿಷ್ಠ ತಾಪಮಾನ ಸರಾಸರಿ 16 ಡಿಗ್ರಿಯಷ್ಟಿತ್ತು. ವಾರಂತ್ಯಕ್ಕೆ ಕನಿಷ್ಠ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದ್ದು 18-19 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.
ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಬೆಂಗಳೂರು, ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿದ್ದರೆ ನಾಳೆ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಕೊಡಗು,ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15-16 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು. ಉಳಿದ ಜಿಲ್ಲೆಗಳಲ್ಲಿ ತಾಪಮಾನ 17-19 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.