Webdunia - Bharat's app for daily news and videos

Install App

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

Krishnaveni K
ಶನಿವಾರ, 28 ಮಾರ್ಚ್ 2026 (08:31 IST)
ಬೆಂಗಳೂರು: ಕರ್ನಾಟಕದಲ್ಲಿ ಈ ವಾರದ ಆರಂಭದಲ್ಲಿ ಕೆಲವು ಕಡೆ ಮಳೆಯಾಗಿತ್ತು. ಇಂದು ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಬೇಸಿಗೆಯ ಬೇಗೆಯ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಮಳೆಯ ಜೊತೆಗೆ ತಾಪಮಾನದಲ್ಲೂ ಗಣನೀಯ ಏರಿಕೆಯಾಗಿತ್ತು. ವಾರಂತ್ಯದಲ್ಲೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉಳಿದ ಜಿಲ್ಲೆಗಳಲ್ಲಿ ವಾರಂತ್ಯದ ಎರಡೂ ದಿನಗಳಲ್ಲಿ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳಿಂದ ತಿಳಿದುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments