Publish Date: Sat, 02 May 2026 (14:06 IST)
Updated Date: Sat, 02 May 2026 (14:08 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ವಾರಂತ್ಯಕ್ಕೂ ಮಳೆಯಾಗುವ ಸಾಧ್ಯತೆಯಿದೆಯಾ ಇಲ್ಲಿದೆ ವಾರಂತ್ಯದ ಹವಾಮಾನ ವರದಿ.
ಕರ್ನಾಟಕದಲ್ಲಿ ಬಿರು ಬೇಸಿಗೆ ನಡುವೆ ಹಲವು ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೊನ್ನೆ ಸುರಿದ ಮಳೆಗೆ 10 ಜನ ಪ್ರಾಣ ಕಳೆದುಕೊಂಡಿದ್ದರು. ಮಳೆಯಿಂದಾಗಿ ತಾಪಮಾನ ಏರಿಕೆಗೆ ಕೊಂಚ ಕಡಿವಾಣ ಬಿದ್ದಿತ್ತು.
ವಾರಂತ್ಯಕ್ಕೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದೀತು.
ಉಳಿದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಉರಿಬಿಸಿಲಿನ ವಾತಾವರಣ ಕಂಡುಬರಲಿದೆ. ರಾಯಚೂರಿನಲ್ಲಂತೂ ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ. ಕರ್ನಾಟಕದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಕಂಡುಬರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ