Publish Date: Tue, 25 Nov 2025 (08:41 IST)
Updated Date: Tue, 25 Nov 2025 (08:44 IST)
ಬೆಂಗಳೂರು: ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ಇಂದು ಮಳೆ ಕಡಿಮೆ, ಆದರೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.
ಬೆಂಗಳೂರು, ಕರಾವಳಿ ಜಿಲ್ಲೆಗಳು, ಕೊಡಗು ಸೇರಿದಂತೆ ಬಹುತೇಕ ಕಡೆ ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಇದರ ಜೊತೆಗೆ ಶೈತ್ಯ ವಾತಾವರಣವೂ ಇತ್ತು. ಆದರೆ ಇಂದು ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಮೋಡ ಕವಿದ ವಾತಾವರಣವಿರಲಿದೆ. ಇಂದು ಯಾವುದೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿಲ್ಲ.
ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬೆಳಗಾವಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ಆದರೆ ರಾಜ್ಯದ ಕನಿಷ್ಠ ತಾಪಮಾನ ಇಂದಿನಿಂದ 17-16 ಡಿಗ್ರಿಯಷ್ಟಾಗಲಿದೆ. ಚಳಿ ಮತ್ತಷ್ಟು ತೀವ್ರವಾಗಲಿದೆ. ಈ ವಾರಂತ್ಯದವರೆಗೂ ಇದೇ ವಾತಾವರಣವಿರಲಿದೆ.