Publish Date: Tue, 27 Jan 2026 (08:36 IST)
Updated Date: Tue, 27 Jan 2026 (08:43 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಿಗೆ ತಟ್ಟಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ನಿನ್ನೆ ಅಪರಾಹ್ನದ ವೇಳೆಗೆ ತುಂತುರು ಮಳೆ, ದಟ್ಟ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಇದರಿಂದಾಗಿ ಚಳಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.
ಇಂದೂ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಗೆ ಸಣ್ಣ ಮಟ್ಟಿಗಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹೊರತುಪಡಿಸಿ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ, ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಇಂದು ಸರಾಸರಿ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರುವುದು.