ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ.
ಕರ್ನಾಟಕದಲ್ಲಿ ಈ ಬಾರಿ ಬೇಸಿಗೆ ಮಳೆ ಚೆನ್ನಾಗಿ ಆಗಲಿದೆ ಎಂದು ಹವಾಮಾನ ವರದಿಗಳು ಸೂಚನೆ ನೀಡಿದ್ದವು. ಅದರಂತೆ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಶನಿವಾರ ಉತ್ತಮ ಮಳೆಯಾಗಿತ್ತು. ಭಾನುವಾರವೂ ಮೋಡ ಕವಿದ ವಾತಾವರಣವಿತ್ತು.
ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆದರೆ ಇಂದು ಮಳೆಯ ಸಾಧ್ಯತೆಯಿಲ್ಲ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿರಲಿದೆ. ನಿಯಮಿತವಾಗಿ ಮಳೆಯಾಗಿರುವುದರಿಂದ ಇಂದು ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದೆ ಎನ್ನಬಹುದು.
ಆದರೆ ಉಳಿದ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.