Select Your Language

Notifications

webdunia
webdunia
webdunia
webdunia

Karnataka Weather: ಭಾನುವಾರ ಈ ಜಿಲ್ಲೆಗಳಲ್ಲಿ ಮಳೆಯ ಸೂಚನೆ

Karnataka Rain
ಬೆಂಗಳೂರು: ಬಿರು ಬೇಸಿಗೆಯ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಇಂದು ಭಾನುವಾರ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಮೊನ್ನೆ ಬೆಂಗಳೂರಿನಲ್ಲಿ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಣ್ಣ ಮಳೆಯಾಗಿತ್ತು. ಒಂದೆಡೆ ವಿಪರೀತ ಬಿಸಿಲು, ಸೆಖೆಯಿದ್ದರೆ ಮತ್ತೊಂದೆಡೆ ಸಣ್ಣ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ.

ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ. ಇದರ ಹೊರತಾಗಿ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಬಹುತೇಕ ಬಿಸಿಲಿನ ವಾತಾವರಣವಿರಲಿದೆ.

ಅದರಲ್ಲೂ ವಿಶೇಷವಾಗಿ ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 39 ಡಿಗ್ರಿಗೆ ಏರಿಕೆಯಾಗಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 34 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರ ತನ್ನಿ, ಎಲ್ಲರಿಗೂ ಒಂದೇ ಕಾನೂನು ತರುತ್ತೇವೆ: ಅಮಿತ್ ಶಾ