Publish Date: Mon, 12 Jan 2026 (08:40 IST)
Updated Date: Mon, 12 Jan 2026 (08:42 IST)
ಬೆಂಗಳೂರು: ರಾಜ್ಯದಲ್ಲಿ ಈಗ ವಿಪರೀತ ಚಳಿಯ ಜೊತೆ ಕೆಲವೆಡೆ ತುಂತುರು ಮಳೆಯ ಸಿಂಚನವಾಗುತ್ತಿದೆ. ಇಂದೂ ರಾಜ್ಯದ ಈ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರ ರಾಜ್ಯದಲ್ಲಿ ವಿಪರೀತ ಚಳಿ ಕಂಡುಬಂದಿತ್ತು. ವಾರಂತ್ಯಕ್ಕೆ ಹಲವೆಡೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಿತ್ತು. ಈ ಹವಾಮಾನ ವೈಪರೀತ್ಯದಿಂದಾಗಿ ಜನ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.
ಇಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ಅಥವಾ ಬಿಸಿಲು ಕಂಡುಬರಲಿದೆ. ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟು ಕಂಡುಬರುವುದು. ಗರಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ ಎಂದು ಹವಮಾನ ವರದಿಗಳು ಸೂಚಿಸುತ್ತಿವೆ.