Select Your Language

Notifications

webdunia
webdunia
webdunia
webdunia

Karnataka Weather: ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಇಂದು ಮಳೆ, ಈ ಜಿಲ್ಲೆಗಳಲ್ಲಿ ಸುಡು ಬಿಸಿಲು

Karnataka Rains
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಈ ಕೆಲವು ಜಿಲ್ಲೆಗಳಲ್ಲಿ ಸುಡು ಬಿಸಿಲು ಕಂಡುಬರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಬೇಸಿಗೆ ಮಳೆಯ ಅಬ್ಬರ ಕಂಡುಬರುತ್ತಿದೆ. ವಾರಂತ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ನಿನ್ನೆ ವರುಣ ಕೊಂಚ ಬಿಡುವು ನೀಡಿದ್ದ. ಆದರೆ ಇಂದು ಮತ್ತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ವಿಶೇಷವಾಗಿ ಇಂದು ಉಡುಪಿ, ಕೊಡಗು, ಉತ್ತರ ಕನ್ನಡ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರ ಹೊರತಾಗಿ ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡುಬರಲಿದೆ.

ಅದರಲ್ಲೂ ಕಲಬುರಗಿ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಇಂದು 37 ಡಿಗ್ರಿಯಷ್ಟಕ್ಕೆ ಏರಿಕೆಯಾಗಲಿದೆ. ರಾಜ್ಯದ ಇಂದಿನ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ