ಬೆಂಗಳೂರು: ಕಳೆದ ಎರಡು ದಿನಗಳಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದ್ದು ನಿನ್ನೆಯೂ ಮೋಡ ಕವಿದ ವಾತಾವರಣವಿತ್ತು. ಇಂದು ಮಳೆಯಾಗುವ ಸಾಧ್ಯತೆಯೇ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ಮಾರ್ಚ್ 11 ರಿಂದ 12 ರವರೆಗೆ ಎರಡು ದಿನ ದಕ್ಷಣಿ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಅದರಲ್ಲೂ ವಿಪರೀತ ತಾಪಮಾನ ಏರಿಕೆಯಾಗಿದ್ದ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು.
ಆದರೆ ಈ ವಾರದಲ್ಲಿ ಮತ್ತೆ ಮಳೆಯಾಗುವ ಸೂಚನೆ ಕಂಡುಬರುತ್ತಿಲ್ಲ. ನಿನ್ನೆಯಿಂದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಇಂದೂ ಅದೇ ವಾತಾವರಣ ಮುಂದುವರಿಯಲಿದೆ. ಇಂದೂ ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರವಿಡೀ ಅಪರೂಪಕ್ಕೆ ಮೋಡ ಮತ್ತು ಬಿಸಿಲಿನ ವಾತಾವರಣವಿರಲಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ತಾಪಮಾನ 40 ರ ಆಸುಪಾಸಿಗೆ ಬಂದು ನಿಲ್ಲಲಿದೆ. ರಾಜ್ಯದಲ್ಲಿ ಇನ್ನು ಒಂದು ವಾರಗಳ ಕಾಲ ಇದೇ ವಾತಾವರಣ ಮುಂದುವರಿಯಬಹುದು ಎಂದು ಹವಾಮಾನ ವರದಿಗಳು ಹೇಳುತ್ತಿವೆ.