Daily Horoscope

Select Your Language

Notifications

webdunia
webdunia
webdunia
webdunia

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

Karnataka Weather, Coastal Rainfall, Meteorological Department
Photo Credit X
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆ ಮತ್ತು ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 

ಉತ್ತರ ಕರ್ನಾಟಕದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಇನ್ನು ಎರಡು ದಿನ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದುಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು