Publish Date: Mon, 16 Jun 2025 (08:21 IST)
Updated Date: Mon, 16 Jun 2025 (08:23 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ವಾರಂತ್ಯಕ್ಕೆ ಭಾರೀ ಮಳೆಯಾಗಿತ್ತು. ಇಂದೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಈ ವಾರದ ಹವಾಮಾನ ಬದಲಾವಣೆಗಳೇನು ಇಲ್ಲಿದೆ ನೋಡಿ ಲೇಟೆಸ್ಟ್ ವರದಿ.
ಮೇ ಕೊನೆಯ ವಾರದಲ್ಲಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ವರುಣ ಬಳಿಕ ಜೂನ್ ಮೊದಲ ವಾರ ಬ್ರೇಕ್ ಕೊಟ್ಟಿತ್ತು. ಇದಾದ ಬಳಿಕ ಕಳೆದ ವಾರ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮೊದಲಾದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ವಾತಾವರಣವಿರಲಿದೆ. ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಈ ವಾರ ಮಂಗಳವಾರದವರೆಗೂ ಮಳೆಯ ವಾತಾವರಣವಿರಲಿದೆ.
ಇದಾದ ಬುಧವಾರದಿಂದ ಕೆಲವು ಕಡೆ ಮಳೆಯ ಅಬ್ಬರ ಕಡಿಮೆಯಾಗುವುದು. ಹಾಗಿದ್ದರೂ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಈ ವಾರವಿಡೀ ಮಳೆ ಮುಂದುವರಿಯಲಿದೆ. ಆದರೆ ಕಲಬರುಗಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಚಾಮರಾಜನಗರ, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಿಂದ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ.