ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ನಿನ್ನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಅಪರಾಹ್ನ ಸುರಿದ ಗಾಳಿ ಸಹಿತ ಮಳೆ ಬಿಸಿಲಿನ ವಾತಾವರಣಕ್ಕೆ ಕೊಂಚ ಬ್ರೇಕ್ ನೀಡಿತ್ತು. ಇಂದೂ ಈ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಬೆಂಗಳೂರಿನಲ್ಲಿ ಮೊನ್ನೆಯಿಂದ ಮೋಡ ಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ನಿನ್ನೆಯಿಂದ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿದ್ದು, ಇಂದು ಅಪರಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳ ಹೊರತಾಗಿ ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಬಳ್ಳಾರಿ, ರಾಯಚೂರು, ಬೀದರ್, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.