ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 15ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಘಳಲ್ಲಿ ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶನಿವಾ ಸುರಿದ ಮಳೆಗೆ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಇಂದು ಕೂಡ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ , ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಭಾನುವಾರ ಮಳೆಯಾಗಲಿದೆ.
ಚಿತ್ರದುರ್ಗ ಮತ್ತು ಗದಗ ಜಿಲ್ಲೆಗಳಲ್ಲೂ ಅಲ್ಪ ಪ್ರಮಾಣದ ಮಳೆಯಾಗಲಿದೆ. ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.