Publish Date: Thu, 05 Jun 2025 (08:28 IST)
Updated Date: Thu, 05 Jun 2025 (08:30 IST)
ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಸತತ ಮಳೆಯಿಂದ ಸಾಕು ಸಾಕಾಗಿ ಹೋಯ್ತು ಎಂದಿದ್ದರೆ ಇಲ್ಲಿದೆ ಅಪ್ ಡೇಟ್.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಆಗಾಗ ಮಳೆಯಾಗುತ್ತಲೇ ಇತ್ತು. ಆದರೆ ಇಂದು ಕರಾವಳಿ ಜಿಲ್ಲೆಗೆ ವರುಣ ಕೊಂಚ ಬ್ರೇಕ್ ಬಿದ್ದಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಇದೇ ವಾತಾವರಣವಿರಲಿದೆ. ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.
ಆದರೆ ರಾಯಚೂರು, ಬೀದರ್ ಮಳೆ, ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗುವ ಸೂಚನೆಯಿದೆ. ಉಳಿಂದತೆ ದಾವಣಗೆರೆ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವಣರವಿರಲಿದೆ.