Select Your Language

Notifications

webdunia
webdunia
webdunia
webdunia

Karnataka Weather: ಕರ್ನಾಟಕ ಈ ಜಿಲ್ಲೆಗಳಲ್ಲಿ ಈ ವಾರವೂ ಭರ್ಜರಿ ಮಳೆ

Karnataka Rains
ಬೆಂಗಳೂರು: ಕಳೆದ ವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿತ್ತು. ಈ ವಾರವೂ ಬಿರು ಬೇಸಿಗೆಯ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲ್ಲಿದೆ ಹವಾಮಾನ ವರದಿ.

ಕಳೆದ ವಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ವಾರದ ಆರಂಭದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮತ್ತು ವಾರಂತ್ಯಕ್ಕೆ ಒಳನಾಡಿನಲ್ಲೂ ಮಳೆಯಾಗಿತ್ತು. ಈ ವಾರವೂ ಮಳೆ ಮುಂದುವರಿಯುವ ಸೂಚನೆಯಿದೆ.

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬೀದರ್, ಹಾವೇರಿ, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಕಲಬುರಗಿ ಜಿಲ್ಲೆಗಳಲ್ಲಿ ಈ ವಾರ ಹಲವು ದಿನಗಳಲ್ಲಿ ಮಳೆಯಾಗುವ ಸೂಚನೆಯಿದೆ.

ಉಳಿದ ಜಿಲ್ಲೆಗಳಲ್ಲಿ ವಾರವಿಡೀ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ರಾಜ್ಯದ ಈ ವಾರದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್