Daily Horoscope
✕

Karnataka Weather: ಈ ವಾರ ಈ ಜಿಲ್ಲೆಗಳಲ್ಲಿ ಮತ್ತಷ್ಟು ಏರಿಕೆಯಾಗಲಿದೆ ತಾಪಮಾನ

Krishnaveni K
ಸೋಮವಾರ, 9 ಮಾರ್ಚ್ 2026 (08:31 IST)
ಬೆಂಗಳೂರು: ಕಳೆದ ವಾರದಿಂದ ತಾಪಮಾನದಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಈ ವಾರವಂತೂ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಲಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಈಗ ಬಿಸಿಲಿನ ತಾಪ ಸುಡುತ್ತಿದೆ. ಕಳೆದ ವಾರದಿಂದ ತಾಪಮಾನದಲ್ಲಿ ಕೊಂಚವೇ ಏರಿಕೆಯಾಗುತ್ತಲೇ ಇದೆ. ಈ ವಾರದ ಅಂತ್ಯಕ್ಕೆ ತಾಪಮಾನದಲ್ಲಿ ಮತ್ತಷ್ಟು ಏರಿಕೆ ನಿರೀಕ್ಷಿಸಬಹುದಾಗಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ವಾರ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಆರಂಭದಲ್ಲಿ 31-32 ಡಿಗ್ರಿಯಷ್ಟು ಕಂಡುಬಂದರೆ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಆದರೆ ವಾರಂತ್ಯಕ್ಕೆ ಬರುವಾಗ 33 ಡಿಗ್ರಿಯಷ್ಟು ಗರಿಷ್ಠ ತಾಪಮಾನವಿರಲಿದ್ದು ಕನಿಷ್ಠ ತಾಪಮಾನವೂ 19 ಡಿಗ್ರಿಯಷ್ಟಾಗಲಿದೆ.

ವಿಶೇಷವಾಗಿ ರಾಯಚೂರು, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಗರಿಷ್ಠ ತಾಪಮಾನ 37 ಡಿಗ್ರಿಗೆ ಏರಿಕೆಯಾಗಲಿದೆ. ಉಳಿದಂತೆ ದಕ್ಷಿಣ ಕನ್ನಡ, ಬೀದರ್, ಉತ್ತರ ಕನ್ನಡ, ತುಮಕೂರು, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34-35 ಡಿಗ್ರಿ ಆಸುಪಾಸಿನಲ್ಲಿರಲಿದೆ. ಉಳಿದ ಜಿಲ್ಲೆಗಳಲ್ಲಿ 31-33 ಡಿಗ್ರಿಯಷ್ಟು ಕಂಡುಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments