Select Your Language

Notifications

webdunia
webdunia
webdunia
webdunia

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Bengaluru Rains

Krishnaveni K

ಬೆಂಗಳೂರು , ಗುರುವಾರ, 17 ಏಪ್ರಿಲ್ 2025 (08:44 IST)
ಬೆಂಗಳೂರು: ಕಳೆದ ವರ್ಷ ಮಳೆಗಾಲ ಅಷ್ಟೊಂದು ಮಳೆಯಾಗಿರಲಿಲ್ಲ. ಆದರೆ ಈ ವರ್ಷ ಮಳೆಗಾಲದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ. ಈ ವರ್ಷ ಮಳೆಗಾಲದ ಪರಿಸ್ಥಿತಿ ಹೇಗಿರಲಿದೆ ಇಲ್ಲಿದೆ ವಿವರ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ. ಬೇಸಿಗೆಯಲ್ಲಿ ತಾಪಮಾನ ಹೆಚ್ಚಿದ್ದರೂ ಏ್ರಪಿಲ್-ಮೇ ತಿಂಗಳ ಅವಧಿಯಲ್ಲಿ ಮುಂಗಾರು ಪೂರ್ವ ಮಳೆ ಬಹುತೇಕ ಭಾಗಗಳಲ್ಲಿ ಉತ್ತಮವಾಗಿರಲಿದೆ ಎಂದು ವರದಿಯಾಗಿತ್ತು.

ಈ ವರ್ಷ ಮೇ ಕೊನೆಯ ವಾರದಲ್ಲಿ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ. ನಂತರ ಮೂರು ತಿಂಗಳು ಭಾರೀ ಮಳೆಯ ನಿರೀಕ್ಷೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಬಹುತೇಕ ಭಾಗಗಳಲ್ಲಿ ಅಂದಾಜಿಗಿಂತ ಹೆಚ್ಚು ಮಳೆಯಾಗಲಿದ್ದು ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದು ಎಂದು ತಿಳಿದುಬಂದಿದೆ.

ಈಶಾನ್ಯ ಭಾರತದ ಕೆಲವು ಪ್ರದೇಶಗಳು, ತಮಿಳುನಾಡು, ಲಡಾಖ್ ಸೇರಿದಂತೆ ಕೆಲವು ಪ್ರದೇಶ ಹೊರತುಪಡಿಸಿ ಉಳಿದೆಲ್ಲೆಡೆ ಉತ್ತಮ ಮಳೆಯಾಗಲಿದೆ. ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ