Webdunia - Bharat's app for daily news and videos

Install App

Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

Sampriya
ಭಾನುವಾರ, 22 ಫೆಬ್ರವರಿ 2026 (11:53 IST)
Photo Courtesy X
ಬೆಂಗಳೂರು: ಕರ್ನಾಟಕದ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು  ಒಣಹವೆ ಮುಂದುವರೆಯಲಿದೆ. ಹೀಗಾಗಿ, , ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಮಳೆಯ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಗುಡುಗು ಮತ್ತು ಮಿಂಚಿನ ಆರ್ಭಟವಿರಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸುಮಾರು 5 ಮಿ.ಮೀ ನಿಂದ 15 ಮಿ.ಮೀ ವರೆಗೆ ಮಳೆಯಾಗಬಹುದು.

ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಗುವ ಸಂಭವವಿದ್ದು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 ಕಿ.ಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. 

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಇರಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments